ಕಿಸನ್ ಬಾಬುರಾವ್ ಹಜಾರೆ ಎಂಬ ಹೆಸರಿನ ಆ ಹಿರಿಯರು ಭ್ರಷ್ಟಾಚಾರದ ವಿರುದ್ಧದ ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿ ಹಾಡಿದ್ದಾರೆ. ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ರೆಲೆಗನ್ ಸಿದ್ಧಿ ಎಂಬ ಹಳ್ಳಿಯನ್ನು ಮಾದರಿ ಹಳ್ಳಿಯಾಗಿ ರೂಪಿಸಿ, ತನ್ನಿಡೀ ಬದುಕನ್ನೇ ಸಮಾಜಕ್ಕಾಗಿ ಮೀಸಲಿಟ್ಟ ಈ ಹಿರಿಯರು ದೆಹಲಿಯ ಜಂತರ್ ಮಂತರ್ ಬಳಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.
ಭ್ರಷ್ಟಾಚಾರವೆಂಬ ಮಹಾಪಿಡುಗು: ಭಾರತದಲ್ಲಿ ದಿನಗಳೆದಂತೆ ಭ್ರಷ್ಟಾಚಾರವೆನ್ನುವುದು ಆಳವಾಗಿ ಬೇರೂರತ್ತಲೇ ಹೋಗುತ್ತಿದೆ. ಈ ರೋಗವುರಾಜಕಾರಣದ ಮೊಗಸಾಲೆಯನ್ನೂ ಬಿಟ್ಟಿಲ್ಲದಿರುವಾಗ, ನಾಡಿನ ವ್ಯವಸ್ಥೆಗಳನ್ನು ಕಟ್ಟಿ ನಿರ್ವಹಿಸಬೇಕಾದ ಜನಪ್ರತಿನಿಧಿ ಸಭೆಗಳುಕೂಡಾ ಭ್ರಷ್ಟಾಚಾರವನ್ನು ಇಲ್ಲವಾಗಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲವೆಂಬ ನೋವು ಜನರಲ್ಲಿದೆ. ಇಡೀವ್ಯವಸ್ಥೆಯೇ ಭ್ರಷ್ಟಾಚಾರದ ಕ್ಯಾನ್ಸರ್ ತಗುಲಿ ನಲುಗುತ್ತಿರುವಾಗ ಇದಕ್ಕೊಂದು ಮದ್ದು ಬೇಕು ಎಂದು ಜನಾಂದೋಲನ ರೂಪಿಸುವಲ್ಲಿ ಈ ಹಿರಿಯ ಜೀವ ತೊಡಗಿದೆ.
ಜನ್ ಲೋಕಪಾಲ್ ಮಸೂದೆಯನ್ನು ಸರಿಯಾಗಿರೂಪಿಸಿ ಜಾರಿಗೊಳಿಸಲುಪ್ರಧಾನಮಂತ್ರಿಗಳಿಗೆ ಮೊರೆಯಿಡುತ್ತಿದ್ದರೂ ಅದು ಫಲಿಸಲಿಲ್ಲವೆಂದುಇದೀಗ ಅಣ್ಣಾ ಹಜಾರೆಯವರು ಸಾಯೋವರೆಗೆ ಉಪವಾಸ ಮಾಡುವುದಾಗಿ ಘೋಷಿಸಿ, ಅದರಂತೆ ಇಂದು ಸತ್ಯಾಗ್ರಹ ಆರಂಭಿಸಿದ್ದಾರೆ.
ಲೋಕಪಾಲ ಮಸೂದೆ ಮತ್ತು ಜನ್ ಲೋಕಪಾಲ್ ಮಸೂದೆ
2010ರಲ್ಲಿ ಭಾರತ ಸರ್ಕಾರ ಭ್ರಷ್ಟಾಚಾರ ನಿಯಂತ್ರಣದ ಉದ್ದೇಶದಿಂದ ಲೋಕ್‍ಪಾಲ್ ಮಸೂದೆಯನ್ನು ಜಾರಿಗೊಳಿಸಲು ಮುಂದಾಯಿತು. ಈ ಮಸೂದೆಯಲ್ಲಿದ್ದ ಹಲವಾರು ಕುಂದುಕೊರತೆಗಳು ಭ್ರಷ್ಟಾಚಾರವನ್ನು ನಿಯಂತ್ರಿಸಲು ಪರಿಣಾಮಕಾರಿಯಾಗಿಲ್ಲವೆಂದು ಅಣ್ಣಾ ಒಂದು ಚಳವಳಿಯನ್ನು ಶುರುಮಾಡಿದರು. ಇದರ ಅಂಗವಾಗಿ"ಭ್ರಷ್ಟಾಚಾರದ ವಿರುದ್ಧ ಭಾರತ" ಎನ್ನುವ ಸಂಘಟನೆ ಸದಸ್ಯರ ಜೊತೆಗೂಡಿ"ಜನ್ ಲೋಕ್‍ಪಾಲ್" ಮಸೂದೆಯನ್ನು ಸಿದ್ಧಪಡಿಸಲಾಯಿತು. ಈ ಮಸೂದೆಯನ್ನು ನ್ಯಾಯಮೂರ್ತಿ ಡಾ. ಸಂತೋಶ್ ಹೆಗ್ಡೆ, ಸರ್ವೋಚ್ಚ ನ್ಯಾಯಾಲಯದನ್ಯಾಯವಾದಿ ಪ್ರಶಾಂತ್ಭೂಷಣ್ ಅವರುಗಳು ಸಿದ್ಧಪಡಿಸಿದ್ದಾರೆ. ಇದರಲ್ಲಿ ಭ್ರಷ್ಟರಿಗೆಜೀವಾವಧಿಯಂತಹ ಕಠಿಣ ಶಿಕ್ಷೆಯೂ, ಜನರ ನೇರ ಪಾಲ್ಗೊಳ್ಳುವಿಕೆಯೂ, ಲೋಕಾಯುಕ್ತರ ವ್ಯಾಪ್ತಿಯ ಹೆಚ್ಚಳವೂಅಡಗಿದ್ದು ಭ್ರಷ್ಟಾಚಾರ ನಿಯಂತ್ರಣಕ್ಕೆ ಕಡಿವಾಣ ಹಾಕುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ.
ಈ ಮಸೂದೆಯಂತೆ ಲೋಕಪಾಲ್ ಮಸೂದೆ ರೂಪುಗೊಳ್ಳಬೇಕು ಎಂದುಒತ್ತಾಯಿಸಿ ಅಣ್ಣಾ ಹಜಾರೆ ಈಗ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಅವರನ್ನು ಬೆಂಬಲಿಸಿ ದೇಶಾದ್ಯಂತ ಜನಸಾಮಾನ್ಯರು ದನಿ ಎತ್ತಿದ್ದಾರೆ. ಈ ದನಿ ಮತ್ತಷ್ಟು ಗಟ್ಟಿಯಾಗಿಸಂಸತ್ತಿನಲ್ಲಿ ಕುಳಿತವರ ಕಿವಿಗಳನ್ನು, ಕಣ್ಣುಗಳನ್ನು ತೆರೆಸಬೇಕಾಗಿದೆ.
No comments:
Post a Comment